Wednesday, July 6, 2022

Latest Posts

ಮಂಗಳೂರು ಪ್ರಧಾನ ಅಂಚೆ ಕಚೇರಿಗಳಲ್ಲಿ ಆಧಾರ್ ಸೇವೆ

ಹೊಸದಿಗಂತ ವರದಿ, ಮಂಗಳೂರು

ಮಂಗಳೂರು ಪ್ರಧಾನ ಅಂಚೆ ಕಚೇರಿಯಲ್ಲಿ ವಾರದ ಎಲ್ಲಾ ದಿನಗಳಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ ಸೇವೆ ಲಭ್ಯ ಇದೆ ಎಂದು ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.

ಭಾನುವಾರ ಮತ್ತು ಸರಕಾರಿ ರಜಾ ದಿನಗಳಂದು ಈ ತನಕ ಕೇವಲ ಮೊಬೈಲ್ ಸಂಖ್ಯೆ ಪರಿಷ್ಕರಣೆಯ ಸೌಲಭ್ಯ ಮಾತ್ರ ಇತ್ತು. ನ.29ರಿಂದ ಪ್ರತಿ ಭಾನುವಾರ ಮತ್ತು ಸರಕಾರಿ ರಜಾ ದಿನಗಳಂದು ಎಲ್ಲಾ ತರಹದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆಯ ಸೇವೆಯನ್ನು ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮಂಗಳೂರು ಪ್ರಧಾನ ಅಂಚೆ ಕಚೇರಿಯಲ್ಲಿ ಪೂರ್ವಾಹ್ನ 10 ಗಂಟೆಯಿಂದ ಸಂಜೆ 5 ಗಂಟೆಯ ತನಕ ಆಧಾರ್ ನೋಂದಣಿ, ಹೆಸರು ತಿದ್ದುಪಡಿ, ಮೊಬೈಲ್ ಅಥವಾ ಇಮೇಲ್ ತಿದ್ದುಪಡಿ, ಲಿಂಗ ತಿದ್ದುಪಡಿ, ವಿಳಾಸ ಬದಲಾವಣೆ, ಜನ್ಮ ದಿನಾಂಕ ತಿದ್ದುಪಡಿ, ಬಯೋಮೆಟ್ರಿಕ್ ತಿದ್ದುಪಡಿ ಮೊದಲಾದ ಸೇವೆಯನ್ನು ಸಾರ್ವಜನಿಕರು ಪಡೆದುಕೊಳ್ಳಬಹುದಾಗಿದೆ.

ಸೇವೆ ಬಯಸುವ ಸಾರ್ವಜನಿಕರು ಆಯಾ ಶನಿವಾರ ಸಂಜೆಯೊಳಗೆ ಪ್ರಧಾನ ಅಂಚೆ ಕಚೇರಿಯ ದೂರವಾಣಿ 0824-2423053 ಇಲ್ಲಿಗೆ ಕರೆ ಮಾಡಿ ಹೆಸರು ನೋಂದಾವಣೆ ಮಾಡಿಕೊಳ್ಳಬೇಕಾಗುತ್ತದೆ. ಮೊದಲು ಬಂದ 50 ಗ್ರಾಹಕರಿಗೆ ಮೊದಲ ಆದ್ಯತೆ ನೀಡಲಾಗುವುದು.

ಮಂಗಳೂರು ಅಂಚೆ ವಿಭಾಗದ 39 ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ ಸೇವೆ ಲಭ್ಯವಿದೆ.

ಕುಲಶೇಖರ ಮತ್ತು ಪಣಂಬೂರು ಅಂಚೆ ಕಚೇರಿಗಳಲ್ಲಿ ತಾಂತ್ರಿಕ ದೋಷದ ಕಾರಣ ಆಧಾರ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಈ ಅಂಚೆ ಕಚೇರಿಗಳಲ್ಲಿ ಆಧಾರ್ ಸೇವೆ ಆರಂಭಗೊಂಡಿರುವುದಾಗಿ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss