spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಂಗಳೂರು| ಭೂ ಸುಧಾರಣಾ ಕಾಯ್ದೆ ತಿದ್ದಪಡಿ ನಡೆಸಿದರೆ ಹೋರಾಟ: ಕಾಂಗ್ರೆಸ್ ಎಚ್ಚರಿಕೆ

- Advertisement -Nitte

ಮಂಗಳೂರು: ಭೂ ಸುಧಾರಣಾ ಕಾಯ್ದೆಗೆ ರಾಜ್ಯ ಸರಕಾರ ತಿದ್ದುಪಡಿಗೆ ಮುಂದಾಗಿರುವುದು ಬಂಡವಾಳಶಾಹಿಗಳಿಗೆ ಕೃಷಿಭೂಮಿ ಖರೀದಿಸಲು ಸಹಕರಿಸಿ ರೈತನನ್ನು ಕೃಷಿ ಕಾರ್ಮಿಕರನ್ನಾಗಿಸುವ ಹುನ್ನಾರ. ಈ ತಿದ್ದುಪಡಿ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಹಿಂಪಡೆಯದಿದ್ದಲ್ಲಿ ವಿಧಾನಮಂಡಲದ ಒಳಗೆ ಹಾಗೂ ಹೊರಗೆ ಕಾಂಗ್ರೆಸ್ ರೈತರ ಪರ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಎ.ಸಿ. ವಿನಯರಾಜ್ ಹೇಳಿದರು.
ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಯಿಂದ ಬಂಡವಾಳಶಾಹಿಗಳು ಮತ್ತು ಕಾರ್ಪೊರೇಟ್ ಕಂಪನಿಗಳು ಕೃಷಿ ಭೂಮಿ ಖರೀದಿಸಲು ಸಹಕಾರಿಯಾಗಲಿದೆ. ರಾಜ್ಯದಲ್ಲಿ ಅಂದಾಜು 75 ಲಕ್ಷ ರೈತ ಕುಟುಂಬಗಳಿವೆ. ಅವರಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರ ಸಂಖ್ಯೆಯೇ ೫೫ ಲಕ್ಷ. ಇವರು ಕಾರ್ಪೊರೇಟ್ ಕಂಪನಿಗಳಿಗೆ ಬಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಕೃಷಿ ಜಮೀನನ್ನು ಕಾರ್ಪೊರೇಟ್ ಕಂಪನಿಗಳು ಖರೀದಿ ಮಾಡಿ ರೈತರನ್ನು ಭೂ ರಹಿತರನ್ನಾಗಿ ಮಾಡುವ ಜತೆಗೆ ಅವರ ಕೈಕೆಳಗೆ ಕೃಷಿ ಕೂಲಿ ಕಾರ್ಮಿಕರಾಗಿ ದುಡಿಯುವಂತೆ ಮಾಡುವ ಎಲ್ಲಾ ಸಾಧ್ಯತೆಗಳು ಈ ತಿದ್ದುಪಡಿಯಿಂದ ಆಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆ ನಾಣ್ಯದ ಎರಡು ಮುಖಗಳಿದ್ದಂತೆ. ಕಾರ್ಪೊರೇಟ್ ಕಂಪನಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಕೊರೋನದಿಂದ ರಾಜ್ಯ ತತ್ತರಿಸಿರುವ ಸಂದರ್ಭದಲ್ಲಿ ಎಪಿಎಂಸಿಗೆ ಕಾಯ್ದೆಗೆ ಚರ್ಚೆ ಮಾಡದೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತರಿಗೆ ಕೊಡಲಿ ಏಟು ನೀಡಿರುವ ಸರಕಾರ ಇದೀಗ ಭೂ ಸುಧಾರಣಾ ಕಾಯ್ದೆಗೂ ಚರ್ಚೆ ಮಾಡದೆ ಸುಗ್ರೀವಾಜ್ಞೆಗೆ ಹೊರಟಿದೆ. ಬೀದಿಗಿಳಿದು ಪ್ರತಿಭಟನೆ ಮಾಡಲು ಸಾಧ್ಯವಾಗದ ಈ ಅಸಹಾಯಕ ಪರಿಸ್ಥಿತಿಯನ್ನು ಸರಕಾರ ಉಪಯೋಗಿಸಿಕೊಂಡಿದೆ ಎಂದರು.
ಜಿ.ಪಂ. ಸದಸ್ಯ  ಶಾಹುಲ್ ಹಮೀದ್, ಮುಖಂಡರಾದ ವಿಶ್ವಾಸ್ ಕುಮಾರ್ ದಾಸ್, ಟಿ.ಕೆ. ಸುಧೀರ್, ಸದಾಶಿವ ಶೆಟ್ಟಿ, ಉಮ್ಮರ್ ಫಾರೂಕ್, ಅನಿಲ್ ಕುಮಾರ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss