ಮಂಗಳೂರು: ಲಾಕ್ ಡೌನ್ ಅವಧಿಯಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅನವಶ್ಯಕವಾಗಿ ರಸ್ತೆಗಳಲ್ಲಿ ಸಂಚರಿಸುತ್ತಿದ್ದ 154 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಸಕಾರಣ ಇಲ್ಲದೆ, ಪೊಲೀಸರ ಎಚ್ಚರಿಕೆ ಮೀರಿ ಕೊರೋನಾ ಲಾಕ್ ಡೌನ್ ಸಮಯದಲ್ಲಿ ರಸ್ತೆಗೆ ಇಳಿದ ವಾಹನ ಚಾಲಕರಿಗೆ ಪೊಲೀಸರು ಈ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಅನವಶ್ಯಕವಾಗಿ ಸಂಚಾರ ಮಾಡಿದರೆ ವಾಹನ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಹರ್ಷ ಸಾರ್ವಜನಿಕರಿಗೆ ಈ ಹಿಂದೆಯೇ ಹಲವು ಬಾರಿ ಎಚ್ಚರಿಕೆ ನೀಡಿದ್ದರು. ಆದರೂ ಬಹಳಷ್ಟು ಮಂದಿ ವಿನಾಕಾರಣ ಸಂಚರಿಸುವುದನ್ನು ಬಿಟ್ಟಿರಲಿಲ್ಲ. ಗುರುವಾರ ಅಂತಹ 154 ವಾಹನಗಳನ್ನು ಮುಟ್ಟುಗೋಲು ಹಾಕಿ ಖಡಕ್ ಸಂದೇಶ ರವಾನಿಸಲಾಗಿದೆ.