Wednesday, July 6, 2022

Latest Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ, ಜನರಲ್ಲಿ ಆತಂಕ

ಬಜ್ಪೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಅನುಮಾನಸ್ಪದ ಬ್ಯಾಂಕ್ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದ್ದು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಬಜ್ಪೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10 ಕ್ಕೆ ಲ್ಯಾಪ್ ಟಾಪ್ ಬ್ಯಾಗ್ ಒಂದು ಅನುಮಾನಸ್ಪದವಾಗಿ ಪತ್ತೆಯಾಗಿದೆ.
ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಜನರನ್ನು ಅಲ್ಲಿಂದ ದೂರ ಸರಿಸಿ ಬ್ಯಾಗನ್ನು ವಿಮಾನ ನಿಲ್ದಾಣದಿಂದ 500 ಮೀಟರ್ ನಷ್ಟು ದೂರ ಇಡಲಾಗಿದೆ. ಇಲ್ಲಿಗೆ ಯಾರಿಗೂ ಪ್ರವೇಶ ನೀಡುತ್ತಿಲ್ಲ.

ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮಾರ್ಗವನ್ನು ಬದಲಾಯಿಸಲಾಗಿದೆ. ಆದರೆ ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss