ಕುಂಬಳೆ: ಜ್ಯುವೆಲ್ಲರಿ ಸಂಸ್ಥೆಯ ಹೂಡಿಕೆದಾರರನ್ನು ವಂಚಿಸಿದ ಮಂಜೇಶ್ವರ ಶಾಸಕ ಎಂ.ಸಿ.ಖಮರುದ್ದೀನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಯುವಮೋರ್ಚಾ ಕಾರ್ಯಕರ್ತರು ಕುಂಬಳೆಯಲ್ಲಿ ಬುಧವಾರ ಶಾಸಕರಿಗೆ ಕಪ್ಪು ಬಾವುಟ ತೋರಿಸಿ ಪ್ರಬಲ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಮಣಿಕಂಠ ರೈ ಪಟ್ಲ , ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ವಿಜಯ್ ಕುಮಾರ್ ರೈ , ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್, ಮಂಡಲ ಕಾರ್ಯದರ್ಶಿ ರಮೇಶ್ ಭಟ್ ಕುಂಬಳೆ, ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಧನಂಜಯ ಮಧೂರು, ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಅಧ್ಯಕ್ಷ ಕೆ.ಸುಧಾಕರ ಕಾಮತ್, ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬಂಬ್ರಾಣ, ಕುಂಬಳೆ ಪಂಚಾಯತ್ ಸದಸ್ಯರಾದ ಕೆ.ಸುಜಿತ್ ರೈ , ಪುಷ್ಪಲತಾ ಶಾಂತಿಪಳ್ಳ , ಯುವಮೋರ್ಚಾ ಪಂಚಾಯತ್ ಸಮಿತಿಯ ಅಧ್ಯಕ್ಷ ಪ್ರದೂಷ ನಾಯ್ಕಾಪು, ಕಾರ್ಯಕರ್ತರಾದ ಅಜಿತ್, ಲೋಹಿತ್ ಮುಂತಾದವರು ಪಾಲ್ಗೊಂಡಿದ್ದರು.