ಮಂಡ್ಯ: ಮಂಡ್ಯದಲ್ಲಿ ಆಶಾ ಕಾರ್ಯಕರ್ತೆ ಯ ಮೇಲೆ ದೌರ್ಜನ್ಯ ನಡೆದಿದ್ದು, ನೊಂದ ಆಶಾ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕು ಹುರುಳಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆಶಾ ಕಾರ್ಯಕರ್ತೆ ಮೀನಾಕ್ಷಿ ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ.
ಇತ್ತೀಚೆಗೆ ಮೈಸೂರಿನ ಮಹದೇಶ್ವರ ನರ್ಸಿಂಗ್ ಹೋಂನಲ್ಲಿ ವ್ಯಕ್ತಿಗೆ ಕೊರೋನಾ ಪಾಸಿಟೀವ್ ಪತ್ತೆಯಾಗಿತ್ತು. ಆಸ್ಪತ್ರೆಗೆ ತೆರಳಿದ್ದವರನ್ನು ಹೋಂ ಕ್ವಾರೆಂಟೈನ್ ಮಾಡಲು ಸೂಚನೆ ನೀಡಲಾಗಿತ್ತು. ಮಹದೇಶ್ವರ ಆಸ್ಪತ್ರೆಗೆ ತೆರಳಿದ್ದ ಹುರುಳಿ ಕ್ಯಾತನಹಳ್ಳಿಯ ವ್ಯಕ್ತಿಯನ್ನು ಹೋಂಕ್ವಾರೆ0ಟೈನ್ಗೆ ಒಳಪಡಿಸಲು ಜಾಗೃತಿ ಮೂಡಿಸಲು ಗ್ರಾಮಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆಗೆ ಗ್ರಾಮದ ಶಂಕಿತ ಹೋಂ ಕ್ವಾರೆಂಟೈನ್ಗೆ ಒಳಪಡದೆ, ಆಶಾ ಕಾರ್ಯಕರ್ತೆ ಮೀನಾಕ್ಷಿ ಮೇಲೆ ದೌರ್ಜನ್ಯ ಎಸಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಇದರಿಂದ ಬೇಸತ್ತ ಮೀನಾಕ್ಷಿ ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಆಕೆಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಶೈಲಜಾ, ತಹಸೀಲ್ದಾರ್ ಎಂ. ರೂಪಾ, ಶಾಸಕ ರವೀಂದ್ರ ಶ್ರಿಕಂಠಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.