ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಂಡ್ಯ| ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಮಂಡ್ಯ: ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೃದ್ಧನೋರ್ವ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಸೂನಗಹಳ್ಳಿ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ತಾಲೂಕಿನ ಮಂಗಲ ಗ್ರಾಮದ ಬೋರಣ್ಣ (65) ಎಂಬಾತನೇ ಮೃತಪಟ್ಟ ವೃದ್ಧ. ಮಾದರಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಅಂತ್ಯಸಂಸ್ಕಾರಕ್ಕೆಂದು ಬೋರಣ್ಣ ಹಾಗೂ ಮತ್ತೋರ್ವ ಮೊಫೆಡ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ಕೆ.ಎಂ. ದೊಡ್ಡಿ ಕಡೆಯಿಂದ ಮಂಡ್ಯಕ್ಕೆ ಬರುತ್ತಿದ್ದ ಗೂಡ್ಸ್ ಆಟೋ ಮೊಫೆಡ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೋರಣ್ಣ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಮತ್ತೋರ್ವ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‍ಗೆ ರವಾನಿಸಲಾಗಿದೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss