ಮಂಡ್ಯ: ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ
ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ.
ಮಳವಳ್ಳಿಯ ಗರ್ಭಿಣಿ ಮಹಿಳೆಯೊಬ್ಬರಿಗೆ ಕೊರೋನಾ ಸೋಂಕು ತಗುಲಿದ್ದು, ಆಕೆಯನ್ನು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತುಂಬು ಗರ್ಭಿಣಿಯಾಗಿರುವ ಆಕೆಗೆ ವಿಶೇಷ ಆರೈಕೆ ಮಾಡಲಾಗಿತ್ತು.
ಹೆರಿಗೆ ವಿಭಾಗದ ತಜ್ಞ ವೈದ್ಯರಾದ ಡಾ. ಯೋಗೇಂದ್ರಕುಮಾರ್ ಅವರ ನೇತೃತ್ವದಲ್ಲಿ ಯಶಸ್ವೀ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ತಂಡ ಆಸ್ಪತ್ರೆಯ ಹೆರಿಗೆ ಶಸ್ತ್ರ ಚಕಿತ್ಸಾ ಕೊಠಡಿಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ವೈದ್ಯರ ಈ ಮಹತ್ಕಾರ್ಯದಿಂದಾಗಿ ಮಗುವಿನ ಕುಟುಂಬಸ್ಥರ ಮುಖದಲ್ಲಿ ನಗು ಕಂಡಿದೆ. ಇನ್ನೆರಡು ದಿನಗಳಲ್ಲಿ ಮಗುವಿಗೂ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯ ಡಾ. ಯೋಗೇಂದ್ರಕುಮಾರ್ ತಿಳಿಸಿದ್ದಾರೆ.
ಕೊರೋನಾ ಸೋಂಕಿತ ಗರ್ಭಿಣಿಗೆ ಶಸ್ತ್ರ ಚಿಕಿತ್ಸೆ ಮಾಡಿದ ಹಿನ್ನಲೆಯಲ್ಲಿ ವೈದ್ಯರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ..