Wednesday, August 10, 2022

Latest Posts

ಮಂಡ್ಯ: ಚಾಕುವಿನಿಂದ ಇರಿದು ಮಹಿಳೆ ಭೀಕರ ಹತ್ಯೆ

ಮಂಡ್ಯ : ಯಾರೂ ಇಲ್ಲದ ಸಮಯದಲ್ಲಿ ಮನೆಯೊಳಗೆ ನುಗ್ಗಿ ಅಪರಿಚಿತ ದುಷ್ಕರ್ಮಿಗಳು ಮಹಿಳೆಯ ಕತ್ತಿಗೆ ಚಾಕುವಿನಿಂದ ಇರಿತು ಭೀಕರವಾಗಿ ಹತ್ಯೆಗೈದಿರುವ ಘಟನೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.

ಬಡಾವಣೆಯ ಮಧುಸೂಧನ್ ಎಂಬುವರ ಪತ್ನಿ ಶ್ರೀಲಕ್ಷ್ಮಿ (45) ಎಂಬಾಕೆಯೇ ಹತ್ಯೆಯಾದವಳಾಗಿದ್ದಾಳೆ. ಈಕೆ ಚಿಕ್ಕಮಗಳೂರು ಜಿಲ್ಲೆಯವಳಾಗಿದ್ದು, ಮೇಲುಕೋಟೆಯ ಮಧುಸೂಧನ್ ಅವರು ಮದುವೆಯಾಗಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಗಂಡ ಮತ್ತು ಮಕ್ಕಳು ಹೊರಗೆ ಹೋಗಿದ್ದ ಸಮಯದಲ್ಲಿ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಆಕೆಯ ಕತ್ತಿಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ರಾತ್ರಿ ಮನೆಗೆ ಧಾವಿಸಿದ ಗಂಡ ಮತ್ತು ಮಕ್ಕಳು ಶ್ರೀಲಕ್ಷ್ಮಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ತಕ್ಷಣ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಸ್ಥಳಕ್ಕೆ ಧಾವಿಸಿದ ಪೆÇಲೀಸರು ಶವವನ್ನು ವಶಕ್ಕೆ ಪಡೆದು ಮಿಮ್ಸ್ ನ ಶವಾಗಾರಕ್ಕೆ ಸಾಗಿಸಿದರು.

ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ಅಧೀಕ್ಷಕ ಕೆ. ಪರಶುರಾಮ, ಅಪರ ಪೆÇಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ, ಡಿವೈಎಸ್ಪಿ ನವೀನ್‍ಕುಮಾರ್, ಸಿಪಿಐ ಸಂತೋಷ್ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss