Thursday, July 7, 2022

Latest Posts

ಮಂಡ್ಯ ಜಿಲ್ಲಾಧಿಕಾರಿಯಾಗಿ ಅಶ್ವತಿ ಎಸ್.ರನ್ನು ನೇಮಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಹೊಸ ದಿಗಂತ ವರದಿ, ಮಂಡ್ಯ :

ಮಂಡ್ಯ ಜಿಲ್ಲಾಧಿಕಾರಿಯಾಗಿ ಅಶ್ವತಿ ಎಸ್. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಡಾ. ಎಂ.ವಿ. ವೆಂಕಟೇಶ್ ಅವರನ್ನು ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರನ್ನಾಗಿ ವರ್ಗಾಹಿಸಲಾಗಿದೆ. ಅವರ ಸ್ಥಾನಕ್ಕೆ ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ‌್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶ್ವತಿ ಎಸ್. ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಡಾ. ಎಂ.ವಿ. ವೆಂಕಟೇಶ್ ಅವರು ಜಿಲ್ಲಾಧಿಕಾರಿಯಾಗಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕೋವಿಡ್ ವೇಳೆ ರಾಜ್ಯದಲ್ಲೇ ಮಂಡ್ಯ ಜಿಲ್ಲೆ ಗಮನ ಸೆಳೆದಿತ್ತುಘಿ. ತಬ್ಲಿಘಿಗಳಿಂದ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಸೋಂಕು ಪ್ರಾರಂಭದಲ್ಲಿ ಕಂಡುಬಂತು. ಅದನ್ನು ಸಮರ್ಥವಾಗಿ ಅವರ ನೇತೃತ್ವದ ತಂಡ ನಿಭಾಯಿಸುವಲ್ಲಿ ಯಶಸ್ವಿಯಾಗಿತ್ತು.
ಬಳಿಕ ಕೆ.ಆರ್. ಪೇಟೆ, ಪಾಂಡವಪುರ, ನಾಗಮಂಗಲ ತಾಲೂಕುಗಳಲ್ಲಿ ಮುಂಬೈ ವಲಸಿಗರಿಂದ ಸೋಂಕು ಕಂಡುಬಂತು. ಅದನ್ನೂ
ಸಹ ಸಮರ್ಥವಾಗಿ ನಿಭಾಯಿಸಿ, ಜಿಲ್ಲೆಯಲ್ಲಿ ಕೊರೋನಾ ಸೋಂಕು ತಹಬದಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಹಲವು ಸಂದರ್ಭದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಸದಾ ಜನಪರ ಕಾಳಜಿ ವಹಿಸುವುದರ ಜೊತೆಗೆ ಹಲವಾರು ಪರಿಣಾಮಕಾರಿ ಕಾರ‌್ಯಕ್ರಮಗಳಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss