ಹೊಸದಿಗಂತ ವರದಿ, ಮಂಡ್ಯ:
ಮಂಡ್ಯ ಜಿಲ್ಲಾಧಿಕಾರಿಯಾಗಿ ಎಸ್. ಅಶ್ವತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸಿದ್ದು, ಇದೇ ಪ್ರಥಮ ಬಾರಿಗೆ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವ ಅವಕಾಶ ಲಭಿಸಿದೆ ಎಂದರು.
ಜಿಲ್ಲೆಯಲ್ಲಿರುವ ಸಾಕಷ್ಟು ಸಮಸ್ಯೆಗಳ ಬಗ್ಗೆ ಡಾ. ಎಂ.ವಿ. ವೆಂಕಟೇಶ್ ಅವರು ತಿಳಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಹಲವಾರು ಕೆಲಸಗಳು ಇನ್ನೂ ಬಾಕಿ ಉಳಿದಿವೆ. ಅವುಗಳನ್ನವು ಮುಂದುವರಿಸುವಂತೆ ಸಲಹೆ ನೀಡಿದ್ದುಘಿ, ಅವರ ಸಲಹೆಯನ್ನು ಸ್ವೀಕರಿಸಿ ಎಲ್ಲವನ್ನೂ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.