Wednesday, August 10, 2022

Latest Posts

ಮಂಡ್ಯ ಜಿಲ್ಲೆಯಲ್ಲಿ ಮಂಗಳವಾರ 126 ಕೊರೋನಾ ಪ್ರಕರಣ ಪತ್ತೆ, 54 ಮಂದಿ ಗುಣಮುಖ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಮಂಗಳವಾರ 126 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಂಡ್ಯ 27, ಮದ್ದೂರು 1, ಮಳವಳ್ಳಿ 9, ಪಾಂಡವಪುರ 21, ಶ್ರೀರಂಗಪಟ್ಟಣ 13, ಕೆ.ಆರ್. ಪೇಟೆ 44, ನಾಗಮಂಗಲ ತಾಲೂಕಿನಲ್ಲಿ 11 ಪ್ರಕರಣಗಳು ಪತ್ತೆಯಾಗಿವೆ.
ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ 54 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಮಂಡ್ಯ ತಾಲೂಕಿನಲ್ಲಿ 29, ಮದ್ದೂರಿನಲ್ಲಿ 8, ಶ್ರೀರಂಗಪಟ್ಟಣ 11, ನಾಗಮಂಗಲ 6 ಮಂದಿ ಗುಣಮುಖರಾಗಿದ್ದಾರೆ.
ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀರಂಗಪಟ್ಟಣ ತಾಲೂಕಿನ 74 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ 9389 ಮಂದಿ ಸೋಂಕಿಗೊಳಗಾಗಿದ್ದು, ಈ ಪೈಕಿ 7863 ಮಂದಿ ಗುಣಮುಖರಾಗಿದ್ದಾರೆ. 1430 ಸಕ್ರಿಯ ಪ್ರಕರಣಗಳಿವೆ.
ಸರ್ಕಾರಿ ಆಸ್ಪತ್ರೆಯಲ್ಲಿ 557, ಖಾಸಗಿ ಆಸ್ಪತ್ರೆಯಲ್ಲಿ 89, ಕೋವಿಡ್ ಕೇರ್ ಸೆಂಟರ್‍ನಲ್ಲಿ 183, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss