Friday, August 12, 2022

Latest Posts

ಮಂಡ್ಯ| ಜಿಲ್ಲೆಯ ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ: ನಾರಾಯಣ ಗೌಡ

ಮಂಡ್ಯ: ಜಿಲ್ಲೆಯ ಮತ್ತು ತಾಲ್ಲೂಕಿನ ಅಭಿವೃದ್ಧಿಯಲ್ಲಿ ಸಾಧಿಸಲು ಶ್ರಮವಹಿಸುತ್ತೇನೆ ಹಾಗೂ 265 ಕೋಟಿ ಅನುದಾನವನ್ನು ಕೆ.ಆರ್.ಪೇಟೆ ತಾಲ್ಲೂಕಿಗೆ ಕೊಟ್ಟಿದ್ದಾರೆ ಮತ್ತು ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ರೀತಿಯಲ್ಲು ಮುಖ್ಯ ಮಂತ್ರಿಗಳು ಸಹಕರಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಹೇಳಿದರು.
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯಲ್ಲಿ ನಡೆದ ಮನೆ ಮನೆಗೆ ಸರ್ಕಾರ ಮನೆ ಬಾಗಿಲಿಗೆ ಆಡಳಿತ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರ ನಿಮ್ಮ ಮನೆ ಮನೆಗಳಿಗೆ ಬಂದಿದೆ ಎಲ್ಲರ ಅಭಿವೃದ್ಧಿಯೇ ಸರ್ಕಾರದ ಅಭಿವೃದ್ಧಿ ಎಂದು ಹೇಳಿದರು.
ಸುಮಾರು 200 ಕೋಟಿ ಅನುದಾನದಲ್ಲಿ ನರ್ಸಿಂಗï ಮತ್ತು ಮೆಡಿಕಲï ಕಾಲೇಜï ಸ್ಥಾಪಿಸಲಾಗುವುದು ಹಾಗೂ 666 ಕೋಟಿ ಅನುದಾನದಲ್ಲಿ ಮನೆ ಮನೆಗೆ ನೀರಿನ ವ್ಯವಸ್ಥೆ ಮಾಡಲಾಗುವುದು ಮತ್ತು ಜಿಲ್ಲೆಯ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಾರ್ವಜನಿಕರು ಸಹಕರಿಸಬೇಕು ಮತ್ತು ಮುಖ್ಯಮಂತ್ರಿಗಳು ಕೆ.ಆರï. ಪೇಟೆ ತಾಲ್ಲೂಕಿನ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಸರ್ವೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಜಲಸಂಪನ್ಮೊಲ ಇಲಾಖೆ ಮತ್ತು ಪಂಚಾಯತ್ ರಾಜï ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಇತರ ಇಲಾಖೆಯ ವತಿಯಿಂದ ರೈತರ ಎಲ್ಲ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಸ್ಥಳದಲ್ಲೇ ಸಾರ್ವಜನಿಕರಿಗೆ ಹಕ್ಕು ಪತ್ರಗಳು, ಭಾಗ್ಯ ಲಕ್ಷ್ಮೀಬಾಂಡïಗಳು ಮತ್ತು ಪಿಂಚಣಿದಾರರಿಗೆ ಪತ್ರಗಳನ್ನು ವಿತರಿಸಿದರು.
ಜಿಲ್ಲೆಯ 350 ಕ್ಕೂ ಹೆಚ್ಚು ಕಂದಾಯ ಸಮಸ್ಯೆಗಳನ್ನು ಬಗೆಹರಿಸಲು ಸ್ಥಳದಲ್ಲಿಯೇ ವ್ಯವಸ್ಥೆ ಮಾಡಲಾಗಿದ್ದು ಪಿಂಚಣಿ ಮತ್ತು 2 ಸಾವಿರ ಮನೆಗಳ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಜಿ. ಪಂ. ಮತ್ತು ಜಿಲ್ಲಾಡಳಿತ ವ್ಯವಸ್ಥಿತವಾಗಿ ಜನರ ಸಮಸ್ಯೆಗಳನ್ನು ನಿವಾರಣೆ ಮಾಡಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.
ಇದೇ ಸಂದರ್ಭದಲ್ಲಿ ನಗರಸಭೆ ಆಯುಕ್ತರು, ಜಿ.ಪಂ.ಮತ್ತು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss