Monday, August 8, 2022

Latest Posts

ಮಂಡ್ಯ| ಮುಖ್ಯಮಂತ್ರಿ ಹುಟ್ಟೂರಲ್ಲಿ ಹೆಚ್ಚುತ್ತಿರುವ ಸೋಂಕು: ನಿಯಂತ್ರಣಕ್ಕೆ ಸಿಎಸ್ಪಿ ಒತ್ತಾಯ

ಮಂಡ್ಯ: ಮುಂಬೈನಿಂದ ಬರುತ್ತಿರುವವರಲ್ಲಿರುವ ಕೊರೊನಾ ಮಹಾಮಾರಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟೂರು ಕೆ.ಆರ್.ಪೇಟೆ ತಾಲೂಕನ್ನು ತಲ್ಲಣಗೊಳಿಸಿದ್ದು, ತತ್‍ಕ್ಷಣವೇ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿ ಜನಪ್ರತಿನಿಧಿಗಳನ್ನು ಒಗ್ಗೂಡಿಸಿಕೊಂಡು ಕೊರೊನಾ ನಿಯಂತ್ರಣಕ್ಕೆ ಕ್ರಮಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಒತ್ತಾಯಿಸಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕುಳಿತು ಜಿಲ್ಲೆಯೊಳಗೆ ವ್ಯಾಪಿಸುತ್ತಿರುವ ಕೊರೊನಾ ಸೋಂಕು ತಡೆಯಲು ಸಾಧ್ಯವಿಲ್ಲ. ಮಂಡ್ಯಕ್ಕೆ ಆಗಮಿಸಿ ಜನಪ್ರತಿನಿಧಿಗಳು, ಅಧಿಕಾರಿಗಳ ಜೊತೆ ಸಭೆ ನಡೆಸಿ ಕೊರೊನಾ ತಡೆಗೆ ಕಾರ್ಯತಂತ್ರ ರೂಪಿಸಿ ಕೆಲಸ ಮಾಡುವಂತೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss