ಮಂಡ್ಯ: ಜಿಲ್ಲೆಯ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.
ರಾಷ್ಟ್ರ, ರಾಜ್ಯ ಮತ್ತು ಜಿಲ್ಲೆಯ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡಿರುವ ಮೈಷುಗರ್ ಕಾರ್ಖಾನೆಯನ್ನು ಜಿಲ್ಲೆಯ ಜೀವನಾಡಿಯಾಗಿದ್ದು, ಸರ್ಕಾರಿ ಸೌಮ್ಯದಲ್ಲಿಯೇ ಉಳಿಸಿಕೊಳ್ಳಬೇಕು. ಸರ್ಕಾರವೇ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದರು.