Tuesday, August 9, 2022

Latest Posts

ಮಂಡ್ಯ: ಯೋಜನೆಗಳಿಗೆ ಹೆಚ್ಚಿನ ಅನುದಾನ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಮಂಡ್ಯ: ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಧ್ಯಾಹ್ನದ ಬಿಸಿಯೂಟ ಯೋಜನೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಗೆ ಸಾಕಷ್ಟು ಅನುದಾನ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಒತ್ತಾಯಿಸಿ ಶುಕ್ರವಾರ ನಗರದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಮಂಡ್ಯ ತಾಲೂಕು ಸಮಿತಿ, ಅಂಗನವಾಡಿ-ಬಿಸಿಯೂಟ-ಆಶಾ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ತಹಸೀಲ್ದಾರ್ ಕಚೇರಿ ಎದುರು ಜಮಾಯಿಸಿದ ಸಂಘಟನೆ  ಮನವಿ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದರು. ಜತೆಗೆ ಕೂಡಲೇ ಮನವಿಗೆ ಸ್ಪಂದಿಸುವಂತೆ ಆಗ್ರಹಿಸಿದರು.

ಕರೊನಾ ಸಂಕಷ್ಟದ ಸಂದರ್ಭದಲ್ಲಿಯೂ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸೋಂಕು ವೇಗವಾಗಿ ಹರಡುತ್ತಿದ್ದರೂ ಇದಕ್ಕೆಲ್ಲ ಹೆದರದೇ ಕೆಲಸ ಮಾಡುತ್ತಿರುವವರನ್ನು ಸರ್ಕಾರ ನಿರ್ಲಕ್ಷಿಸಿದೆ. ಇನ್ನು ಕರೊನಾ ಸೇನಾನಿಗಳಿಗೆ ಜೀವರಕ್ಷಕ ಸಾಧನೆ ಕೊಡದ ಪರಿಣಾಮ ಕೆಲವರು ಸಾಯುತ್ತಿರುವುದು ಆಘಾತಕಾರಿ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss