ಹೊಸದಿಗಂತ ಆನ್ ಲೈನ್ ಡೆಸ್ಕ್:
ಜನವರಿ 14 ರ ‘ಮಕರ ಸಂಕ್ರಾಂತಿ’ ವೇಳೆ ರಾಜ್ಯದಲ್ಲಿ ಕೋವಿಡ್ -19 ಲಸಿಕೆ ಲಭ್ಯವಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಹೇಳಿದ್ದಾರೆ.
ನಾವು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮಾರ್ಚ್ 2020ರಲ್ಲಿ ಕೋವಿಡ್ -19 ವಿರುದ್ಧ ಅಭಿಯಾನ ಪ್ರಾರಂಭಿಸಿದ್ದೇವೆ. ಈ ವರ್ಷದ ಆರಂಭದಲ್ಲಿ ಲಸಿಕೆಯ ಡ್ರೈ ರನ್ ನಡೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇನ್ನು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಆಕ್ಸ್ಫರ್ಡ್ ಕೋವಿಡ್ -19 ಲಸಿಕೆ ಕೋವಿಶೀಲ್ಡ್ ತುರ್ತು ಬಳಕೆಗೆ ರಾಷ್ಟ್ರೀಯ ಔಷಧ ನಿಯಂತ್ರಕದ ತಜ್ಞರ ಸಮಿತಿ ಅನುಮತಿ ನೀಡಿದ್ದು, ಕೆಲವೇ ದಿನಗಳಲ್ಲಿ ಇದರ ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಇದೆ.