Tuesday, July 5, 2022

Latest Posts

ಮಕ್ಕಳ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಸಚಿವ ಸುರೇಶ್ ಕುಮಾರ್

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರ ನೀಡುವ ವೇಳೆಯೇ ಮಾಸ್ಕ್‌ಗಳನ್ನೂ ನೀಡಬೇಕು. ಜೊತೆಗೆ ಮಾಸ್ಕ್ ಹಾಕಿಕೊಂಡು ಪರೀಕ್ಷೆ ಬರೆಯುವ ಅಭ್ಯಾಸ ಮಾಡಿಕೊಳ್ಳಲು ಸೂಚಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ಸೂಚನೆ ನೀಡಿದ್ದಾರೆ.
ನಗರದ ಜಿಪಂ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆ ಕುರಿತು ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ಎರಡು ಅಂಶಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಕ್ಕಳ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಎಲ್ಲಾ ವಿದ್ಯಾರ್ಥಿಗಳೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವಂತಾಗಬೇಕು. ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಪ್ರತಿ ವಿದ್ಯಾರ್ಥಿಯೂ ಮಾಸ್ಕ್ ಧರಿಸಿಯೇ ಪರೀಕ್ಷೆ ಎದುರಿಸಬೇಕು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss