ಮಗಳ ಮದುವೆಗೆ ಬಂದಿದ್ದ ತಂದೆ ಕೊರೋನಾಗೆ ಬಲಿ

0
175

ರಾಯಚೂರು : ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಗಳ ಮದುವೆಗೆ ಬಂದಿದ್ದ ತಂದೆ ಕೊರೋನಾ ವೈರಸ್ ಗೆ ಬಲಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ವನಕೇರಿ ಮೂಲದ ವ್ಯಕ್ತಿ (45) ರಾಯಚೂರಿನ ಸಿರವಾರ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದ್ದ ಮದುವೆಗೆ ಆಗಮಿಸಿದ್ದರು. ಮಗಳ ಮದುವೆ ಮುಗಿದ ಬಳಿಕ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ರಾಯಚೂರು ರಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿಯ ಗಂಟಲು ದ್ರವವನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ಕೊರೊನಾ ಪರೀಕ್ಷಾ ವರದಿಯಲ್ಲಿ ವ್ಯಕ್ತಿಗೆ ಕೊರೋನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್ ನಿಯಮಾನುಸಾರ ಮೃತ ಸೋಂಕಿತ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

LEAVE A REPLY

Please enter your comment!
Please enter your name here