ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಡಿಕೇರಿಯಲ್ಲಿ ನಿರಂತರ ಮಳೆ| ಭಾಗಮಂಡಲ-ತಲಕಾವೇರಿ ರಸ್ತೆಯಲ್ಲಿ ಭೂ ಕುಸಿತ: ವಾಹನ ಸಂಚಾರ ಸ್ಥಗಿತ

ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಭಾಗಮಂಡಲ- ತಲಕಾವೇರಿ ರಸ್ತೆಯ ಕೋಳಿಕಾಡು ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ರಸ್ತೆ ತುಂಬಾ ಮಣ್ಣಿನ ರಾಶಿ ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಅತಿಯಾದ ಮಳೆಯಾದರೆ ಮತ್ತಷ್ಟು ಅನಾಹುತಗಳು ಸಂಭವಿಸಬಹುದೆನ್ನುವ ಭಯ ಸ್ಥಳೀಯ ಗ್ರಾಮಸ್ಥರಲ್ಲಿ ಮೂಡಿದೆ.
ಇತ್ತ ಕಾವೇರಿ ನದಿಯಲ್ಲಿ ಪ್ರವಾಹ ಹೆಚ್ಚಾಗಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss