Friday, August 12, 2022

Latest Posts

ಮಡಿಕೇರಿಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

ಹೊಸ ದಿಗಂತ ವರದಿ, ಮಡಿಕೇರಿ:

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ರಾಮಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನಕ್ಕೆ ನಗರಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಮಡಿಕೇರಿಯ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಮಡಿಕೇರಿಯ ಅಭಿಮನ್ಯು ವಸತಿ ವತಿಯಿಂದ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತುಉ.
ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಪ್ರಮುಖರಾದ ಬಿ.ಕೆ. ಅರುಣ್ ಕುಮಾರ್, ಜೀವನ್ , ಅನಿತಾ ಪೂವಯ್ಯ, ಚಂದ್ರಶೇಖರ್, ಆರ್.ಬಿ.ರವಿ, ನವೀನ್ ಪೂಜಾರಿ, ಶಿವಕುಮಾರ್, ಭಾರತಿ ರಮೇಶ್, ಪ್ರೇಮಾ, ಶ್ವೇತಾ, ಮೀನಾ ಕುಮಾರಿ, ರುಕ್ಮಿಣಿ, ಭವಾನಿ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.
ಜಿಲ್ಲೆಯ ಎಲ್ಲಾ ತಾಲೂಕಿನ, ಎಲ್ಲಾ ಗ್ರಾ.ಪಂ ವ್ಯಾಪ್ತಿಯ 294 ಗ್ರಾಮದಲ್ಲಿಯೂ ನಿಧಿ ಸಂಗ್ರಹ ಅಭಿಯಾನ ಆರಂಭಗೊಂಡಿದ್ದು, ಕೊಡಗು ಜಿಲ್ಲೆಯಲ್ಲಿ ಜ.25 ವರೆಗೆ ಅಭಿಯಾನ ನಡೆಯಲಿದೆ.
ಇದಕ್ಕಾಗಿ ಜಿಲ್ಲಾ, ತಾಲೂಕು, ಗ್ರಾ.ಪಂ ಮತ್ತು ಗ್ರಾಮ ಸಮಿತಿಗಳನ್ನು ರಚಿಸಲಾಗಿದ್ದು, ಸಂಘ ಪರಿವಾರದ ಎಲ್ಲಾ ಸಂಘಟನೆಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿವೆ.
ಜಿಲ್ಲಾ ಸಂಯೋಜಕರಾಗಿ ವಿಹಿಂಪನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ, ಸಹ ಸಂಯೋಜಕರಾಗಿ ಕುಟ್ಟಂಡ ಮಿರನ್ ಕಾವೇರಪ್ಪ, ನಾಪಂಡ ರವಿ ಕಾಳಪ್ಪ, ಬಿ.ಬಿ.ಮಹೇಶ್, ಚೇತನ್, ರೀನಾ ಪ್ರಕಾಶ್ ಕಾರ್ಯನಿರ್ವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss