Wednesday, August 17, 2022

Latest Posts

ಮಡಿಕೇರಿಯಲ್ಲಿ ಸುಸೂತ್ರವಾಗಿ ನಡೆದ ಸಿಇಟಿ ಪರೀಕ್ಷೆ: 94 ಮಂದಿ ಗೈರು

ಮಡಿಕೇರಿ : ಕೋವಿಡ್-19 ಸೋಂಕಿನ ಆತಂಕದ ನಡುವೆಯೂ ಗುರುವಾರ ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಸುಸೂತ್ರವಾಗಿ ನಡೆಯಿತು.
ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 451 ವಿದ್ಯಾರ್ಥಿಗಳು, ಸಂತ ಜೋಸೆಫರ ಕಾಲೇಜಿನಲ್ಲಿ 285 ವಿದ್ಯಾರ್ಥಿಗಳು, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 148, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 184 ಸೇರಿದಂತೆ 1068 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 94 ವಿದ್ಯಾರ್ಥಿಗಳು ಗೈರು ಆಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವಲಿಂಗ ಶೆಟ್ಟಿ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!