Thursday, August 11, 2022

Latest Posts

ಮಡಿಕೇರಿ| ಕೋವಿಡ್ ಆಸ್ಪತ್ರೆಯಲ್ಲಿ 41 ಮಂದಿ ದಾಖಲು: ವರದಿ ನಿರೀಕ್ಷೆಯಲ್ಲಿ 214 ಮಂದಿ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಸಕ್ತ ಕೋವಿಡ್ ಆಸ್ಪತ್ರೆಯಲ್ಲಿ 41 ಮಂದಿ ದಾಖಲಾಗಿದ್ದಾರೆ. ಇವರೂ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 214ಮಂದಿ ಪ್ರಯೋಗಾಲಯದ ವರದಿಯ ನಿರೀಕ್ಷೆಯಲ್ಲಿದ್ದಾರೆ.
ಈಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ವಿಷಯ ತಿಳಿಸಿದ್ದು, ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 4567 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು,ಈ ಪೈಕಿ 4350 ಮಂದಿಯ ವರದಿ ನೆಗೆಟಿವ್ ಬಂದಿದೆ. ಮೂರು ಮಂದಿಯ ವರದಿ ಪಾಸಿಟಿವ್ ಬಂದಿದ್ದು, ಈ ಪೈಕಿ ಒಬ್ಬರು ಗುಣಮುಖರಾಗಿದ್ದರೆ, ಇನ್ನು ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇತರ ದೇಶ ಹಾಗೂ ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದ್ದು, ಅದರಂತೆ ಕಳೆದ 14 ದಿನಗಳಲ್ಲಿ ಇತರ ದೇಶದ 6 ಮಂದಿ ಹಾಗೂ ಇತರ ರಾಜ್ಯದ 493 ಮಂದಿ ಸೇರಿದಂತೆ ಒಟ್ಟು 499ಮಂದಿ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss