Friday, July 1, 2022

Latest Posts

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ರಿಂದ 1 ಕೋಟಿ ರೂ.ವೆಚ್ಚದ ರಸ್ತೆ ಉದ್ಘಾಟನೆ

ಹೊಸ ದಿಗಂತ ವರದಿ, ಕುಶಾಲನಗರ:

ಲೋಕೋಪಯೋಗಿ ಇಲಾಖೆಯ ವತಿಯಿಂದ ಒಂದು ಕೋಟಿ ವೆಚ್ಚದ ರಸ್ತೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್  ರಸ್ತೆಗಳನ್ನು ಸಾರ್ವಜನಿಕರ ಓಡಾಟಕ್ಕೆ ಮುಕ್ತಗೊಳಿಸಿದರು.
ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೊಳ್ಳಲಾಗಿದ ಹೆಬ್ಬಾಲೆ ಗ್ರಾಮದ ಅಂಬೇಡ್ಕರ್ ಕಾಲೋನಿಯ 25 ಲಕ್ಷದ ಕಾಂಕ್ರಿಟ್ ರಸ್ತೆ ಮತ್ತು ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದಲಿಂಗಪುರ ರಸ್ತೆ ಮತ್ತು ಮರೂರು ರಸ್ತೆ, ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ 63 ಲಕ್ಷ ವೆಚ್ಚದ ಚಿಕ್ಕತ್ತೂರು -ಕೂಡುಮಂಗಳೂರು ಗ್ರಾಮದ ರಸ್ತೆಯನ್ನು ಶಾಸಕರು ದ್ಘಾಟಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ, ತಾಲೂಕು ಪಂಚಾಯತ್ ಸದಸ್ಯರಾದ ಗಣೇಶ್, ಸಬಿತಾ ಚನ್ನಕೇಶವ, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯರಾದ ಕೆ.ಕೆ.ಭೋಗಪ್ಪ, ಭಾಸ್ಕರ್ ನಾಯಕ್, ಕೂಡುಮಂಗಳೂರು ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಮಂಜುನಾಥ, ಗುರುಲಿಂಗಪ್ಪ, ಪ್ರವೀಣ್, ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಪೀಟರ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ ಸೇರಿದಂತೆ ಅಧಿಕಾರಿ ವರ್ಗದವರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss