Thursday, August 11, 2022

Latest Posts

ಮಡಿಕೇರಿ| ಜೂ.18 ಪಿಯು ಇಂಗ್ಲೀಷ್ ಪರೀಕ್ಷೆ: ಜಿಲ್ಲೆಯಲ್ಲಿ 5927 ವಿದ್ಯಾರ್ಥಿಗಳಿಗಾಗಿ ಸಿದ್ಧತೆ

ಮಡಿಕೇರಿ: ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಜೂ.18 ರಂದು ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 5,927 ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವಲಿಂಗ ಶೆಟ್ಟಿ ತಿಳಿಸಿದ್ದಾರೆ.
ಜಿಲ್ಲೆಯ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,927 ವಿದ್ಯಾರ್ಥಿಗಳ ಪೈಕಿ 477 ಹೊರ ಜಿಲ್ಲೆಯ ಮತ್ತು 5 ಹೊರ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss