ಮಡಿಕೇರಿ| ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಿಸಿ: ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ

0
36

ಮಡಿಕೇರಿ: ಅನುಸೂಜಿತ ಜಾತಿ, ಅನುಸೂಚಿತ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹೆಚ್ಚಿನ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಹಾಗೂ ಸಫಾಯಿ ಕರ್ಮಚಾರಿಗಳ/ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್‍ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಪೌರ ಕಾರ್ಮಿಕರಿಗೂ ವಸತಿ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ಮಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ ಅವರು, ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ಮಶಾನಕ್ಕಾಗಿ ಜಿಲ್ಲಾಧಿಕಾರಿಯವರ ಸೂಚನೆಯಂತೆ ಸೂಕ್ತ ಸ್ಥಳವನ್ನು ಗುರುತಿಸಲು ವೀರಾಜಪೇಟೆ ತಹಶೀಲ್ದಾರರೊಂದಿಗೆ ಚರ್ಚಿಸಿದ್ದು, ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಹಿಂದಿನ ಸಭೆಯಲ್ಲಿ ಚರ್ಚಿಸಿದಂತೆ ನಾಪೋಕ್ಲು ಮರಂದೋಡ ಪಂಚಾಯಿತಿ ವ್ಯಾಪ್ತಿಯ ಬಿದ್ದಂಡತಟ್ಟು, ಕೆರೆತಟ್ಟು, ಬಾಳೆಗುಂಡಿ ಹಾಗೂ ಅಡಿಯರ ಕಾಲೋನಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲಾ ಮನೆಗಳಿಗೆ ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಐಟಿಡಿಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್
ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ  , ಡಿವೈಎಸ್‍ಪಿ ದಿನೇಶ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಮಡಿಕೇರಿ ತಹಶೀಲ್ದಾರ್ ಮಹೇಶ್ ಇತರರು ಇದ್ದರು.

LEAVE A REPLY

Please enter your comment!
Please enter your name here