ಮಡಿಕೇರಿ: ಕೊರೋನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಏ.14ರವರೆಗೆ ಲಾಕ್ಡೌನ್ ಘೋಷಿಸಿದ್ದರೂ ಅನೇಕರು ಇದರ ಮಹತ್ವವನ್ನು ಅರಿಯದೆ ರಸ್ತೆಯಲ್ಲಿ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. ಈ ರೀತಿ ಅನಾವಶ್ಯಕವಾಗಿ ತಿರುಗಾಡುವ ವಾಹನಗಳ ಸಂಚಾರವನ್ನು ನಿಯಂತ್ರಿಸುವ ಸಲುವಾಗಿ ಕಾರ್ಯಾಚರಣೆ ನಡೆಸಿರುವ ಪೊಲೀಸರು 73 ದ್ವಿಚಕ್ರ, 39 ಚತುಶ್ಚಕ್ರ ಹಾಗೂ 5 ಆಟೋ ರಿಕ್ಷಾಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಸುಮನ.ಡಿ.ಪಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಮುಂದೆ ಅನಾವಶ್ಯಕವಾಗಿ ರಸ್ತೆಗಿಳಿಯುವ ವಾಹನ ಸವಾರರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.