ಉಡುಪಿ: ಮಣಿಪಾಲದ ಎಂಐಟಿ ಬಸ್ಸು ನಿಲ್ದಾಣದಿಂದ ಮಣಿಪಾಲ ಟೈಗರ್ ಸರ್ಕಲ್ವರೆಗೆ ರಾ.ಹೆ. 169(ಎ)ರ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
ಈ ಪ್ರದೇಶದಲ್ಲಿ ಅನಧಿಕೃತವಾಗಿ ವಾಹನಗಳ ನಿಲುಗಡೆಯನ್ನು ಕಂಡು ಬಂದಿದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಅಪಘಾತಗಳಿಗೂ ಕಾರಣವಾಗುವ ಸಾಧ್ಯತೆ ಇರುವುದರಿಂದ ಇಲ್ಲಿ ವಾಹನ ಪಾರ್ಕಿಂಗ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಆದ್ದರಿಂದ ಇಲ್ಲಿ ಅನಧಿಕೃತ ವಾಹನಗಳ ನಿಲುಗಡೆ ಕಂಡು ಬಂದರೆ, ಕ್ರಮ ಕೈಗೊಂಡು ದಂಡ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲ್ಲದೇ ನೋ ಪಾರ್ಕಿಂಗ್ ಫಲಕಗಳನ್ನು ಅಳವಡಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಉಡುಪಿ ನಗರಸಭೆಯ ಪೌರಾಯುಕ್ತ ಆನಂದ ಸಿ. ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.