Tuesday, July 5, 2022

Latest Posts

ಮತಪೆಟ್ಟಿಗೆ ಸಾಗಿಸುತ್ತಿದ್ದ ಬಸ್, ಟಿಪ್ಪರ್ ಡಿಕ್ಕಿ: 15 ಕ್ಕೂ ಹೆಚ್ಚು ಸಿಬ್ಬಂದಿಗೆ ಗಂಭೀರ ಗಾಯ

ಹೊಸದಿಗಂತ ವರದಿ,ವಿಜಯಪುರ:

ಗ್ರಾಪಂ ಚುನಾವಣೆ ಮತಪೆಟ್ಟಿಗೆ ಸಾಗಿಸುತ್ತಿದ್ದ ಬಸ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ, 15 ಕ್ಕೂ ಹೆಚ್ಚು ಸಿಬ್ಬಂದಿಗಳು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಈ ಭಾಗದ ಕೊಪ್ಪ, ಕೊಪ್ಪ ತಾಂಡಾ, ಸಿದ್ದಾಪುರ, ಹಳ್ಳೂರ ಮತಗಟ್ಟೆಗಳ ಮತಪೆಟ್ಟಿಗೆಯನ್ನು ತರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಈ ಬಸ್ ನಲ್ಲಿ 35 ಕ್ಕೂ ಹೆಚ್ಚು ಸಿಬ್ಬಂದಿಗಳು ಸಂಚರಿಸುತ್ತಿದ್ದು, ಚುನಾವಣೆ ಅಧಿಕಾರಿ, ಪೊಲೀಸರು ಸೇರಿದಂತೆ 15 ಕ್ಕೂ ಹೆಚ್ಚು ಸಿಬ್ಬಂದಿಗಳು ಗಂಭೀರ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ತಹಶೀಲ್ದಾರ್ ಭೇಟಿ, ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss