ಹೊಸದಿಗಂತ ಆನ್ಲೈನ್ ಡೆಸ್ಕ್:
ಯು.ಎಸ್. ಕ್ಯಾಪಿಟಲ್ನಲ್ಲಿ ನಡೆದ ದಾಂಧಲೆಗೆ ಮತ್ತಷ್ಟು ಪ್ರಚೋದನೆ ನೀಡುವ ಅಪಾಯದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಲಾಗಿದೆ.
ಟ್ರಂಪ್ ಬೆಂಬಲಿಗರು ಹಿಂಸಾಚಾರ ನಡೆಸಿದ ಬಳಿಕ ಟ್ರಂಪ್ ಖಾತೆಯನ್ನು 12 ಗಂಟೆಗಳ ಕಾಲ ಅಮಾನತು ಮಾಡಲಾಗಿತ್ತು. ಇದೀಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಮತ್ತೆ ಏನೂ ಅನಾಹುತ ಆಗದಿರಲಿ ಎಂದು ಟ್ವಿಟರ್ ಟ್ರಂಪ್ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ.
ಹಿಂಸಾಚಾರ ಹಿನ್ನೆಲೆ ಸಾಮಾಜಿಕ ಜಾಲತಾಣ ಕಂಪನಿಗಳು ಟ್ರಂಪ್ ಖಾತೆ ನಿಯಂತ್ರಿಸಿವೆ. ಅಧಿಕಾರ ಅವಧಿ ಮುಗಿಯುವವರೆಗೆ ಅವರ ಫೇಸ್ಬುಕ್ ಖಾತೆ ಕೂಡ ಅಮಾನತು ಮಾಡಲಾಗಿದೆ.