ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಭಾರತ ಹಾಗೂ ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯದ ವೇಳೆ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡಿದ್ದು, ಇದರಿಂದ ಅವರು ಪಂದ್ಯದ ಮೂರನೇ ದಿನ ಆಟದಿಂದ ಹೊರಗುಳಿದಿದ್ದರು.
ಈ ಹಿನ್ನೆಲೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಜಡೇಜಾ ಅವರಿಗೆ ಹೆಬ್ಬೆರಳಿನ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.
ಅವರು ತಮ್ಮ ಫೋಟೋವೊಂದನ್ನುಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ‘ಸ್ವಲ್ಪ ಸಮಯದವರೆಗೆ ವಿಶ್ರಾಂತಿ ಪಡೆದು ಶೀಘ್ರದಲ್ಲೇ ಅಬ್ಬರದಿಂದ ಮರಳುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಮತ್ತೆ ಮರಳುವ ವಿಶ್ವಾಸ ಮೂಡಿಸಿದ್ದಾರೆ.