Wednesday, July 6, 2022

Latest Posts

ಮತ್ತೆ ಕದನ ವಿರಾಮ ಉಲ್ಲಂಘಿಸಿದ ‘ಪಾಪಿ’ಸ್ಥಾನ: ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮ!

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.
ಪಾಕ್ ದಾಳಿಗೆ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಸೋಮವಾರ ನಸುಕಿನ ಜಾವ ಗಡಿ ನಿಯಂತ್ರಣ ರೇಖೆಯಲ್ಲಿನ ಪೂಂಚ್ ಜಿಲ್ಲೆಯ ರಾಜೌರಿ ನೌಶೆರಾ ವಲಯದಲ್ಲಿ ಮತ್ತು ಕತೌ ಜಿಲ್ಲೆಯ ಐಬಿ ವಲಯದಲ್ಲಿ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ದಾಳಿ ನಡೆಸಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಹತ್ತಿರ ನೌಶೆರಾ ವಲಯದ ಪ್ರದೇಶದಲ್ಲಿ ಕಾವಲು ಕಾಯುತ್ತಿದ್ದ ಸೇನಾ ಯೋಧ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡರು. ನಂತರ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss