Wednesday, August 17, 2022

Latest Posts

ಮತ್ತೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆಗಳು!

ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾನುವಾರ ಮತ್ತೆ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.
ಜುನಿಮಾರ್ ಪ್ರಾಂತ್ಯದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಗುಪ್ತಚರ ಇಲಾಖೆಯ ಮಾಹಿತಿಯ ಹಿನ್ನೆಲೆ ಭದ್ರತಾಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪೊಲೀಸ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದರಿಂದ ಇದಕ್ಕೆ ಪ್ರತ್ಯುತ್ತರ ನೀಡಿರುವ ಭದ್ರತಾಪಡೆಗಳು ನಾಲ್ವರು ಭಯೋತ್ಪಾದಕರನ್ನು ಮಟ್ಟಹಾಕಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!