ಬೆಳಗಾವಿ: ಕಳೆದ ಎರಡು ದಿನಗಳಿಂದ ತಣ್ಣಗಾಗಿದ್ದ ಮಹಾಮಾರಿ ಕೊರೋನಾ ವೈರಸ್ ಹಾವಳಿ ಮತ್ತೆ ಜಿಲ್ಲೆಯಲ್ಲಿ ಮುಂದುವರೆದಿದೆ. 1 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 302 ಕ್ಕೆ ಏರಿಕೆಯಾಗಿದೆ.ಬುಧವಾರ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲಟೆನ್ ದಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 38 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.