Wednesday, June 29, 2022

Latest Posts

ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ: ಸಿಎಂ ಬಿಎಸ್​ವೈ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಸಿಎಂ ಬಿಎಸ್​ವೈ ಮತ್ತೊಮ್ಮೆ‌ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿದ ಸಂದರ್ಭದಲ್ಲಿ ಮತ್ತೆ ಮತ್ತೆ ಲಾಕ್ ಡೌನ್ ಬಗ್ಗೆ ಪ್ರಸ್ತಾಪ ಮಾಡಬೇಡಿ ಎಂದುಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ಸಮಸ್ಯೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಹಾಗೆಯೇ ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಲು ಸೂಚನೆ ನೀಡಿದರು.  ಯಾವುದೇ ಕಾರಣಕ್ಕೂ ಸೋಂಕಿತರು ಆಸ್ಪತ್ರೆಗಳಿಗೆ ಅಲೆದಾಡುವಂತಾಗಬಾರದು ಎಂದು ಆದೇಶಿಸಿದ್ದಾರೆ.
ಆಸ್ಪತ್ರೆ ಯಲ್ಲಿ ಮೃತರಾದವರಿಗೆ ರಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಬೇಕು. ಕೋವಿಡ್ ಸೋಂಕು ಕಂಡು ಬಂದಲ್ಲಿ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು.ಮನೆಯಲ್ಲಿ ಮೃತರಾದವರಿಗೂ ರಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸುವಂತೆ ಯಡಿಯೂರಪ್ಪ ನಿರ್ದೇಶನ ನೀಡಿದರು
ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ನೀಡುವುದನ್ನು ಖಾತರಿ ಪಡಿಸಿಕೊಳ್ಳಬೇಕು. ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್​ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ಹಾಕುವಂತೆ ಹಾಗೂ ರೋಗ ಲಕ್ಷಣದಿಂದ ಬಳಲುತ್ತಿರುವ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
ಆಸ್ಪತ್ರೆ ಯಲ್ಲಿ ಮೃತರಾದವರಿಗೆ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು. ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ,  ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು‌ ಕ್ರಮ ವಹಿಸಬೇಕು ಎಂದು ಸಿಎಂ ತಿಳಿಸಿದರು.
ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿಪಡಿಸಿಕೊಳ್ಳಬೇಕು.ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ  ದಾಖಲಿಸದೆ,ಕೋವಿಡ್ ಕೇರ್ ಸೆಂಟರ್ ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ನಲ್ಲಿರಿಸಬೇಕು. ತೀವ್ರತರ ರೋಗಲಕ್ಷಣದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ವ್ಯವಸ್ಥೆ ಮಾಡಬೇಕು,ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಹಾಸಿಗೆ ಹಂಚಿಕೆ ಮಾಡಬೇಕು. ರೋಗಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು ಎಂದು ಸೂಚಿಸಿದರು.
ವೈದ್ಯರ ಕೊರತೆ ನಿವಾರಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದ್ದು, ಸೂಕ್ತ ಪ್ರಮಾಣದಲ್ಲಿ ಅಂಬ್ಯುಲೆನ್ಸ್ ನಿಗದಿ ಪಡಿಸಲಾಗಿದೆ. ಪ್ರತಿ ವಾರ್ಡ್ ಗಳಲ್ಲಿ ಕಲ್ಯಾಣ ಮಂಟಪ, ವಸತಿ ಗೃಹಗಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸಿಕೊಳ್ಳುವಂತೆ ಹೇಳಿದರು.
ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವಂತೆ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ ಯಡಿಯೂರಪ್ಪ, ಜನ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವ ಸಾಧ್ಯತೆಗಳಿರುವ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಸರ್ಕಾರದ ಮಾರ್ಗ ಸೂಚಿ ಪಾಲನೆಗೆ ಒತ್ತು ನೀಡುವಂತೆ ಸಲಹೆ ಮಾಡಿದರು.

 

 

 

  

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss