Thursday, August 11, 2022

Latest Posts

ಮತ್ತೆ ಸುದ್ದಿಯಾದ ಉಳ್ಳಾಲ ಸೇತುವೆ, ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ ಕಣ್ಮರೆ!

ಮಂಗಳೂರು: ಕೆಫೆ ಕಾಫಿ ಡೇ ಮಾಲಕ ಸಿದ್ಧಾರ್ಥ್ ಆತ್ಮಹತ್ಯೆಯ ಬಳಿಕ ಉಳ್ಳಾಲ ಸೇತುವೆ ಸುದ್ದಿಯಾಗುತ್ತಲೇ ಇದೆ. ಈ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಶುಕ್ರವಾರವೂ ಒಂದು ದುರಂತ ಸಂಭವಿಸಿದೆ. ವ್ಯಕ್ತಿಯೊಬ್ಬರು ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ನಾಪತ್ತೆಯಾದ ಘಟನೆ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ತಲಪಾಡಿ ದೇವಿಪುರ ನಿವಾಸಿ ಸುರೇಂದ್ರ (45) ನೇತ್ರಾವತಿ ನದಿಗೆ ಹಾರಿ ಕಣ್ಮರೆಯಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಇವರು ಶುಕ್ರವಾರ ಮಧ್ಯಾಹ್ನ ವೇಳೆ ನೇತ್ರಾವತಿ ಸೇತುವೆ ಮೇಲೆ ನಡೆದುಕೊಂಡು ಹೋಗಿ ನೇತ್ರಾವತಿಗೆ ಹಾರಿದ್ದಾರೆಂದು ತಿಳಿದ  ಬಂದಿದೆ. ನಾಪತ್ತೆಯಾದ ವ್ಯಕ್ತಿಗೆ ವಿಪರೀತ ಕುಡಿತದ ಚಟವಿದ್ದು, ಈತನ ಮೊಬೈಲ್ ಸೇತುವೆ ಮೇಲೆ ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss