Sunday, June 26, 2022

Latest Posts

ಮತ್ತೊಂದು ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ: ಐದು ಮಂದಿಯ ಬಂಧನ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯ ಖಾನ್ ಮಾರುಕಟ್ಟೆಯಲ್ಲಿಯೂ ಶನಿವಾರ ತಡರಾತ್ರಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮೊಳಗಿದೆ.

ಇದನ್ನು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದು, ದೇಶದ್ರೋಹಿ ಕೃತ್ಯವೆಸಗಿದ ಮೂವರು ಮಹಿಳೆಯರ ಸಹಿತ ಇಬ್ಬರು ವ್ಯಕ್ತಿಗಳನ್ನು ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ್ದಾರೆ.

ಖಾನ್ ಮಾರುಕಟ್ಟೆಯ ಮೆಟ್ರೋ ನಿಲ್ದಾಣದ ಬಳಿ ತಡರಾತ್ರಿ ಬೈಕ್ ರೇಸ್ ಮಾಡುತ್ತಿದ್ದ ಗುಂಪೊಂದು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಅರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರ ಕುರಿತಾದ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss