ಹೊಸ ದಿಗಂತ ಆನ್ ಲೈನ್ ಡೆಸ್ಕ್:
ನಿಮ್ಮ ಮನೆಯ ಬಾಗಿಲಿಗೆ ಬರಲಿದೆ ತಾಜಾ ಮೀನು! ಹೇಗೆ ಅಂತೀರಾ? ಹೌದು , ಮೀನುಗಾರಿಕೆ ಇಲಾಖೆ ಇತಂದ್ದೊಂದು ನೂತನ ಆಪ್ ಸಿದ್ದಪಡಿಸಿದೆ. ಆನ್ ಲೈನ್ ಮೂಲಕ ಮೀನು ಆರ್ಡರ್ ಮಾಡಿದರೆ ಮನೆ ಬಾಗಿಲಿಗೆ ಮೀನು ತಲುಪಿಸುವ ವಿನೂತನ ಆಪ್ ಪ್ರಾರಂಭಿಸಲಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.
ಮೀನನ್ನು ಆನ್ಲೈನ್ ಮೂಲಕ ಮನೆಗೆ ಸರಬರಾಜು ಮಾಡುವ ಯೋಜನೆ ಇಲಾಖೆಯಲ್ಲಿದ್ದು, ಅದನ್ನ ಶೀಘ್ರದಲ್ಲಿಯೇ ಜಾರಿಗೊಳಿಸಲಾಗುತ್ತಿದೆ. ಇದಕ್ಕಾಗಿ 137.20 ಕೋಟಿ ರೂ. ಯೋಜನಾ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ. ಇನ್ನು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮುಂದಿನ ಐದು ವರ್ಷಗಳಿಗೆ ರಾಜ್ಯದಲ್ಲಿ ಸುಮಾರು 4,115 ಕೋಟಿ ರೂ. ಕ್ರಿಯಾ ಯೋಜನೆ ಸಲ್ಲಿಸಲಾಗಿದೆ ಎಂದರು.
ಮೀನು ಮಾರಾಟಕ್ಕೆ ಸದ್ಯ ಆಪ್ ಸಿದ್ದಪಡಿಸಲಾಗುತ್ತಿದ್ದು, ನ.21ರಂದು ಮತ್ಸ್ಯ ಸಂಪದ ಯೋಜನೆ ಹಾಗೂ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುವುದು. App ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಬೇಕಾದ ಮೀನುಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಗ್ರಾಹಕರಿಗೆ ಸಿಗಲಿದೆ ಎಂದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ಸ್ಯ ಸಂಪದ ಯೋಜನೆಗೆ ಚಾಲನೆ ನೀಡಲಿದ್ದಾರೆ. ಒಳನಾಡು ಮೀನುಗಾರಿಕೆಯಲ್ಲಿ ರಾಜ್ಯ ದೇಶದಲ್ಲೇ 9ನೇ ಸ್ಥಾನದಲ್ಲಿದೆ. ಸಮುದ್ರ ಕಿನಾರೆ ಮೀನುಗಾರಿಕೆಯಲ್ಲಿ 4ನೇ ಸ್ಥಾನದಲ್ಲಿ ಇದರಲ್ಲಿ ಪ್ರಥಮ ಸ್ಥಾನ ಪಡೆಯುವುದು ನಮ್ಮ ಗುರಿಯಾಗಿದೆ ಎಂದು ಕೋಟ ಹೇಳಿದರು.