ಹೊಸದಿಗಂತ ವರದಿ,ಮೈಸೂರು:
ಕರ್ತವ್ಯನಿರತ ಚುನಾವಣಾ ಅಧಿಕಾರಿ ಮೃತಪಟ್ಟಿದ್ದಾರೆ.
ಹೃದಯಾಘಾತದಿಂದ ಮತ ಎಣಿಕಾ ಕೇಂದ್ರದಲ್ಲೆ ಅಸ್ವಸ್ಥಗೊಂಡಿದ್ದ ಅಧಿಕಾರಿ ಮೃತಪಟ್ಟಿದ್ದಾರೆ.
ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ಘಟನೆ ನಡೆದಿದ್ದು, ಬೋರೆಗೌಡ(52) ಮೃತ ಚುನಾವಣಾ ಅಧಿಕಾರಿ.
ಪಿರಿಯಾಪಟ್ಟಣ ತಾಲ್ಲೂಕಿನ ಮತ ಎಣಿಕೆ ನಡೆಯುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು,ತಕ್ಷಣ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಎನ್.ಶೆಟ್ಟಹಳ್ಳಿ ಗ್ರಾ.ಪಂ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದ ಬೋರೆಗೌಡ ಅವರು ಲೋಕೋಪಯೋಗಿ ಇಲಾಖೆ ಎಇಇ ಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.