Monday, July 4, 2022

Latest Posts

ಮದುವೆ ಮನೆಗೆ ತೆರಳಿದ್ದ ವ್ಯಕ್ತಿ ಕಾಡಾನೆ ತುಳಿತಕ್ಕೆ ಬಲಿ

ಹೊಸದಿಗಂತ ವರದಿ, ಕೊಡಗು:

ಮದುವೆ ಸಮಾರಂಭ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಯೊಬ್ಬರು ಕಾಡಾನೆ ತುಳಿತಕ್ಕೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ.

ಬಲ್ಲಮಾವಟಿಯ ಪೇರೂರು ಗ್ರಾಮದ ಮಾಂಜಾಟ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರನ್ನು ಅಲ್ಲಿನ ನಿವಾಸಿ ಪಿ.ಎಂ.ಅಪ್ಪಣ್ಣ (48) ಎಂದು ಗುರುತಿಸಲಾಗಿದೆ.

ಕಳೆದ ರಾತ್ರಿ ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss