Sunday, June 26, 2022

Latest Posts

ಮದ್ದೂರು| ಪುಣೆಯಲ್ಲಿ ಮೃತಪಟ್ಟ ಮಹಿಳೆಯ ಮೃತದೇಹ ರವಾನೆಗೆ ಜಿಲ್ಲಾಡಳಿತ ಬ್ರೇಕ್

ಮದ್ದೂರು: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣೆಯಲ್ಲಿ ಮೃತಪಟ್ಟ ಮಹಿಳೆಯ ಶವವನ್ನು ತಾಲೂಕಿಗೆ ತರುತ್ತಿದ್ದಾಗ ಮಂಡ್ಯ ಜಿಲ್ಲಾಡಳಿತದ ಮನವಿ ಮೇರೆಗೆ ಬೆಳಗಾವಿ ಜಿಲ್ಲಾಡಳಿತ ರಾಜ್ಯದ ಗಡಿಯಲ್ಲಿ ತಡೆ ಹಿಡಿದಿದೆ.
ತಾಲೂಕಿನ ಗ್ರಾಮವೊಂದರ ಮಹಿಳೆ ಪುಣೆಯಲ್ಲಿ ಸಾಫ್ಟ್‍ವೇರ್ ಇಂಜಿನಿಯರ್ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಆಕೆ ಹೃದಯ ಸಂಬಂ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮೃತದೇಹವನ್ನು ಅಲ್ಲಿಂದ ರವಾನೆ ಮಾಡಲಾಗುತ್ತಿತ್ತು. ಈ ಮಾಹಿತಿ ಜಿಲ್ಲಾದ್ಯಂತ ಹರಿದಾಡಿತ್ತು.
ಅಂತೆಯೇ, ಈಗಾಗಲೇ ಮುಂಬೈನಿಂದ ಶವ ತಂದು ಪಾಂಡವಪುರ ತಾಲೂಕಿನಲ್ಲಿ ಅಂತ್ಯಸಂಸ್ಕಾರ ಮಾಡಿದವರಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಮತ್ತೆ ಅದೇ ರೀತಿ ಆಗದಂತೆ ಜಿಲ್ಲಾಡಳಿತ ಎಚ್ಚರವಹಿಸಬೇಕೆಂಬ ಮಾತು ಕೇಳಿಬಂದವು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿದ ಜಿಲ್ಲಾಕಾರಿ ಡಾ.ಎಂ.ವಿ.ವೆಂಕಟೇಶ್ ಶನಿವಾರ ರಾತ್ರಿ ಬೆಳಗಾವಿ ಜಿಲ್ಲಾಡಳಿತದೊಂದಿಗೆ ಸಂಪರ್ಕ ಮಾಡಿ ಶವವಿದ್ದ ವಾಹನ ತಡೆ ಹಿಡಿಯುವಂತೆ ಮನವಿ ಮಾಡಿದ್ದರು. ಅದೇ ರೀತಿ ಅವರು ಕರ್ನಾಟಕ ಗಡಿ `Áಗದಲ್ಲಿ ವಾಹನ ತಡೆಹಿಡಿದಿದ್ದಾರೆ. ಅಂತಿಮವಾಗಿ ಸಂಬಂಕರು ಮಹಿಳೆಯ ಅಂತ್ಯಸಂಸ್ಕಾರವನ್ನು ಮಹಾರಾಷ್ಟ್ರದಲ್ಲಿಯೇ ಮಾಡಲು ಒಪ್ಪಿದ್ದಾರೆಂದು ತಿಳಿದುಬಂದಿದೆ..

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss