ಹೊಸದಿಲ್ಲಿ: ದೇಶದಲ್ಲಿ ಕೊರೋನಾ ಲಾಕ್ ಡೌನ್ ಕುರಿತಾಗಿ ಪ್ರಧಾನಿ ಮೋದಿ ಮುಖ್ಯಮಂತ್ರಿಗಳ ಜೊತೆ ಸೋಮವಾರ ಸಭೆ ನಡೆಸಲಿದ್ದಾರೆ.
ದೇಶದಾದ್ಯಂತ ಲಾಕ್ ಡೌನ್ ಸಡಿಲಿಕೆ ಮಾಡುವ ಕುರಿತಾಗಿ ಪ್ರಧಾನಿ ಮೋದಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ 5ನೇ ಬಾರಿಗೆ ಸಭೆ ನಡೆಸಲಿದ್ದಾರೆ.
ಈಗಾಗಲೇ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 63 ಸಾವಿರ ಗಡಿ ದಾಟಲಿದ್ದು, 2109 ಮಂದಿ ಈಗಾಗಲೇ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಹಿನ್ನಲೆ ದೇಶದಲ್ಲಿ ಕೊರೋನಾ ಲಾಕ್ ಡೌನ್ 3.0 ಸ್ವಲ್ಪ ಮಟ್ಟಿಗೆ ಸಡಿಲವಾಗಬಹುದೇ ಹೊರತು ಸಂಪೂರ್ಣ ಹಿಂಪಡೆಯುವ ಯಾವುದೇ ಸೂಚನೆಗಳು ಇಲ್ಲ.
ಲಾಕ್ ಡೌನ್ 3.0 ನಲ್ಲಿ ದೇಶದಲ್ಲಿ ಕೊರೋನಾ ಪ್ರಕರಣಗಳ ಆದಾರದ ಮೇಲೆ ಪ್ರದೇಶಗಳನ್ನು ಗ್ರೀನ್, ಆರೆಂಜ್ ಮತ್ತು ರೆಡ್ ಝೋನ್ ಗಳಾಗಿ ವಿಂಗಡಿಸಲಾಗಿದೆ.
ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 850ರ ಗಡಿಯಲ್ಲಿದ್ದು, 31 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
PM @narendramodi to hold the 5th meeting via video-conference with state Chief Ministers tomorrow afternoon at 3 PM.
— PMO India (@PMOIndia) May 10, 2020