ಲಖನೌ: ಉಸಿರಾಟದ ತೊಂದರೆ, ಮೂತ್ರಕೋಶ ತೊಂದರೆ ಮತ್ತು ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಅವರ ಆರೋಗ್ಯ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಲಾಲ್ ಜೀ ಟಂಡನ್ ಸ್ಥಿತಿ ಗಂಭೀರವಿದ್ದರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸದ್ಯ ತೀವ್ರ ನಿಗಾ ಘಟಕದಲ್ಲಿ
ಲಖನೌನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲ್ ಜೀ ಟಂಡನ್, ಸದ್ಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ನಾವೆಲ್ಲರೂ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇವೆ. ನಮ್ಮ ಆಸ್ಪತ್ರೆಯ ನುರಿತ ವೈದ್ಯರ ತಂಡವೊಂದು ಲಾಲ್ ಜೀ ಟಂಡನ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರನ್ನು ದಿನದ 24 ಗಂಟೆಯೂ ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಉತ್ತರ ಪ್ರದೇಶ ರಾಜ್ಯಪಾಲ ಆನಂದಿ ಬೆನ್ ಪಟೇಲ್, ಆಸ್ಪತ್ರೆಗೆ ಭೇಟಿ ನೀಡಿ ಟಂಡನ್ ಅವರ ಕುಟಂಬಸ್ಥರಿಗೆ ಧೈರ್ಯ ಹೇಳಿದ್ದಾರೆ. ಜೂನ್ 11ರಂದು ಲಾಲ್ ಜೀ ಟಂಡನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.