Sunday, August 14, 2022

Latest Posts

ಮನೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಿದ್ದರೆ ಹೊರ ರಾಜ್ಯದಿಂದ ಜಿಲ್ಲೆಗೆ ಬರಬೇಡಿ: ಜಿಲ್ಲಾಧಿಕಾರಿ ಜಿ. ಜಗದೀಶ


ಉಡುಪಿ: ಮನೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಿದ್ದರೆ ದಯವಿಟ್ಟು ಹೊರ ರಾಜ್ಯದಿಂದ ಜಿಲ್ಲೆಗೆ ಬರಬೇಡಿ, ಸ್ವಲ್ಪ ದಿನ ತಡೆಯಿರಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದಿಂದ ಬಂದರೆ ಇಡೀ ಮನೆ ಸೀಲ್ ಆಗುತ್ತದೆ. ಮಕ್ಕಳು ಮನೆಯಿಂದ ಹೊರಗೆ ಹೋಗಿ ಪರೀಕ್ಷೆ ಬರೆಯಲು ಆಗುವುದಿಲ್ಲ. ಆದ್ದರಿಂದ ಮಕ್ಕಳು ಪರೀಕ್ಷೆ ಮುಗಿಸಿದ ಮೇಲೆ ಊರಿಗೆ ಬನ್ನಿ ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿಗೆ ದಿಗ್ಬಂಧನ ನಿಯಮದ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇದೆ. ಹೊರರಾಜ್ಯದಿಂದ ಬಂದವರನ್ನು ಗೃಹ ಮತ್ತು ಸಾಂಸ್ಥಿಕ ದಿಗ್ಬಂಧನಕ್ಕೆ ಕಳುಹಿಸುವ ಅಧಿಕಾರವೂ ಇದೆ. ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಬರುವರಿಗೆ 14 ದಿನ ಗೃಹ ದಿಗ್ಬಂಧನ ಕಡ್ಡಾಯ. ಅದನ್ನು ಉಲ್ಲಂಘಿಸಿದರೆ ಶಿಕ್ಷಿಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss