ಹೊಸದಿಗಂತ ವರದಿ, ಬೆಳಗಾವಿ:
ಮನೆಯಲ್ಲಿ ಮಲಗಿದ್ದ ಯುವಕನನ್ನು ಹೊರಗೆ ಕರೆದುಕೊಂಡು ಹೋಗಿ ಸ್ನೇಹಿತರೇ ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿದ್ದಾರೆ.
ಹಳೆ ಬೆಳಗಾವಿಯ ಅಂಬೇಡ್ಕರ ಗಲ್ಲಿಯ ರೈತ ಗಲ್ಲಿಯಲ್ಲಿ ಬುಧವಾರ ಮಧ್ಯರಾತ್ರಿ ಘಟನೆ ನಡೆದಿದ್ದು, ಕೊಲೆಯಾದ ಯುವಕ ಜೈಪಾಲ್ ಮಸನೂ ಘರಾನೆ ಎಂದು ತಿಳಿದುಬಂದಿದೆ.
ಮನೆಯಲ್ಲಿ ಮಲಗಿದ್ದ ಜೈಪಾಲ್ ನನ್ನು ಆತನ ಸ್ನೇಹಿತರು ಹೊರಗೆ ಕರೆದುಕೊಂಡು ಹೋಗಿ ಮನೆ ಮುಂದಿನ ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಶಹಪುರ ಸಿಪಿಐ ರಾಘವೇಂದ್ರ ಹವಾಲ್ದಾರ್, ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆ ಮಾಡಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.