ಹೊಸದಿಲ್ಲಿ: ಪ್ರಧಾನಮಂತ್ರಿ ಭಾರತೀಯ ಜನೌಷ ಪರಿಯೋಜನೆಯ (ಪಿಎಂಬಿಜೆಪಿ) ಜನೌಷ ಕೇಂದ್ರಗಳ ಮೂಲಕ ಮನೆ ಮನೆಗೆ ಔಷಧ ಸರಬರಾಜು ಮಾಡುವ ಸೌಲಭ್ಯವನ್ನು ಆರಂಭಿಸಲಾಗಿದೆ. ಅಗತ್ಯವಿರುವವರು ವಿಶೇಷವಾಗಿ ಹಿರಿಯ ನಾಗರಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅದಕ್ಕಾಗಿ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ‘ಜನೌಷಸುಗಮ್’ ಎಂಬ ಆಪ್ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಈ ಆಪ್ನಲ್ಲಿ ನಿಮ್ಮ ಹತ್ತಿರದ ಜನೌಷ ಕೇಂದ್ರ, ಆ ಕೇಂದ್ರದ ಲೊಕೇಶನ್ ಮ್ಯಾಪ್, ಕೇಂದ್ರದಲ್ಲಿ ನಿಮಗೆ ಬೇಕಾದ ಔಷ ಲಭ್ಯಇದೆಯೇ ಅಥವಾ ಇಲ್ಲವೇ ?ಅಂಗಡಿಯ ದೂರವಾಣಿ ಸಂಖ್ಯೆ ಇತ್ಯಾದಿ ವಿವರಗಳು ಇರುತ್ತವೆ.ಲಾಕ್ಡೌನ್ ಸಂದರ್ಭದಲ್ಲಿ ಔಷಧ ಅಂಗಡಿಗಳ ಬಳಿ ಗುಂಪು ಸೇರುವ ಅಗತ್ಯವಿಲ್ಲ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರ ಸಚಿವರು ಮನವಿ ಮಾಡಿಕೊಂಡಿದ್ದಾರೆ.