Sunday, June 26, 2022

Latest Posts

ಮನೆ ಮೇಲ್ಛಾವಣಿ ಕುಸಿದು ದಂಪತಿ ಸಾವು, ಪುತ್ರ ಪ್ರಾಣಾಪಾಯದಿಂದ ಪಾರು

ಹೊಸದಿಗಂತ ವರದಿ, ಬಳ್ಳಾರಿ

ಮನೆ ಮೇಲ್ಚಾವಣಿ ಕುಸಿದು ದಂಪತಿಗಳಿಬ್ಬರು ಮೃತಪಟ್ಟ ಘಟನೆ ಮಂಗಳವಾರ ನಗರದ ಕೌಲ್ ಬಜಾರ್ ಪ್ರದೇಶದ ಕಡಪ ಬೀದಿಯಲ್ಲಿ ನಡೆದಿದೆ. ಅದೃಷ್ಟವಶಾತ್​ ಅವಘಡದಲ್ಲಿ ದಂಪತಿಯ 12 ವರ್ಷದ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕೊಲ್ಲಣ್ಣ (45), ಸಾವಿತ್ರಮ್ಮ (40) ಮೃತ ದಂಪತಿಗಳು. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಕೊಲ್ಲಣ್ಣ ಅವರು ತನ್ನ ಕುಟುಂಬದೊಂದಿಗೆ ಮಣ್ಣಿನ ಮನೆಯಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಸುರಿದ ಜಿಟಿ ಜಿಟಿ‌ ಮಳೆ ಹಿನ್ನೆಲೆ ಮನೆಯ ಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಪುತ್ರ ಪಕ್ಕದ‌ ಮನೆಯಲ್ಲಿ ಮಲಗಿದ್ದ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss