ಹೊಸದಿಗಂತ ಆನ್ ಲೈನ್ ಡೆಸ್ಕ್:
ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಲವಂತವಾಗಿ ಕರ್ನಾಟಕ ಬಂದ್ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್’ವೈ ಎಚ್ಚರಿಕೆ ನೀಡಿದರು.
ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನೀಡಿದ ಹೇಳಿಕೆಯನ್ನು ಮುಖ್ಯಮಂತ್ರಿ ಬಿಎಸ್ ವೈ ಖಂಡಿಸಿದರು. ಮಹಾರಾಷ್ಟ್ರ ಡಿಸಿಎಂ ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರವು ಮರಾಠ ಜನಾಂಗದ ಅಭಿವೃದ್ಧಿಗಾಗಿ ಮಾಡಿದ್ದು, ಮರಾಠಿಗರು ನಮ್ಮ ರಾಜ್ಯದ ಕನ್ನಡಿಗರು. ಡಿ.5ರಂದು ಕರ್ನಾಟಕ ಬಂದ್ ಮಾಡುವ ಅಗತ್ಯವಿಲ್ಲ. ಬಲವಂತವಾಗಿ ಬಂದ್ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.