ಹೊಸದಿಗಂತ ಆನ್ ಲೈನ್ ಡೆಸ್ಕ್:
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿದೆ.
ಮರಾಠ ಸಮುದಾಯಕ್ಕಾಗಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ, 50 ಕೋಟಿ ರೂ. ಅನುದಾನ ಘೋಷಿಸಿದ ರಾಜ್ಯ ಸರ್ಕಾರದ ವಿರುದ್ಧ ಸಂಘಟನೆಗಳು ಕಿಡಿಕಾರುತ್ತಿದೆ. ಈ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರವನ್ನು ಕೈಬಿಡುವಂತೆ ಕನ್ನಡ ಪರ ಹೋರಾಟಗಾರರು ನ.27ರವರೆಗೂ ಸರ್ಕಾರಕ್ಕೆ ಗಡುವು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ವಾಟಾಳ್ ನಾಗರಾಜ್ ಅವರು, ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆ ಮಾಡಿರುವುದು ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಡಿ.5 ರಂದು ಕರ್ನಾಟಕ ಬಂದ್ ಮಾಡಲು ಚರ್ಚೆ ನಡೆಯುತ್ತಿದ್ದೆ. ನ.27ರಂದು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡ ನಂತರ ನಾವು ಬಂದ್ ಕುರಿತು ನಿರ್ಧಾರ ಮಾಡುತ್ತೇವೆ ಎಂದರು.