Sunday, August 14, 2022

Latest Posts

ಮರ ಕಳ್ಳತನ: ಮೂವರು ಆರೋಪಿಗಳ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಸೋಮವಾರಪೇಟೆ:

ಕಾಫಿ ತೋಟದಲ್ಲಿ ಮರ ಕಡಿದು ಕಳ್ಳ ಸಾಗಾಟ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಶನಿವಾರಸಂತೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹಾಸನ ಜಿಲ್ಲೆಯ ಕಚಮ್ಮನ ಹೊಸಕೋಟೆಯ ಸೋಮಶೇಖರ, ಕಿರಿಕೊಡ್ಲಿಯ ಪುಟ್ಡಸ್ವಾಮಿ, ಹಾಸನ ಹೊಸೂರು ಗದರಾಮದ ಗೌತಮ್ ಬಂಧಿತರು.
ಸೆ.3ರಂದು ರಾತ್ರಿ ವೇಳೆ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ತೋಟದಲ್ಲಿದ್ದ ಸುಮಾರು 20 ಸಾವಿರ ರೂ. ಮೌಲ್ಯದ ಮರಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ದು, ಈ ಬಗ್ಗೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ರು.
ಸೆ. 9ರ ಶನಿವಾರಸಂತೆ‌ ನಿರೀಕ್ಷಕ ಎಸ್. ಪರಶಿವಮೂರ್ತಿ ಮತ್ತು ತಂಡದವರು ಆರೋಪಿಗಳನ್ನು ಬಂಧಿಸಿ, ಕಳವಾಗಿದ್ದ ಮರಗಳನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಒಂದು ಟಾಟಾ ಸುಮೋ, ಒಂದು ಟ್ರ್ಯಾಕ್ಟರ್ ಸೇರಿದಂತೆ ಸುಮಾರು ನಾಲ್ಕೂವರೆ ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಮತ್ತು ಸೋಮವಾರಪೇಟೆ ಉಪ ಅಧೀಕ್ಷಕ ಶೈಲೇಂದ್ರ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಎಸ್ಐ, ಶಶಿಧರ್, ಸಿಬ್ಬಂದಿಗಳಾದ ಲೋಕೇಶ್, ಶಶಿಕುಮಾರ್, ಡಿಂಪಲ್, ಮುರಳಿ, ಷಣ್ಮುಖ ನಾಯಕ, ಧನಂಜಯ ಭಾಗವಹಿಸಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss